ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ.
ಬೆಂಗಳೂರಿನ ಆರ್ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸೋಮವಾರ ಶಾಲೆಯ ಇ-ಮೇಲ್ ಚೆಕ್ ಮಾಡಿದ ವೇಳೆ ಬೆದರಿಕೆ ಪತ್ರ ಬಂದಿರುವುದು ಪತ್ತೆಯಾಗಿದೆ.
ಬೆದರಿಕೆ ಪತ್ರ ಪತ್ತೆಯಾಗುತ್ತಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.
#RSSTIMES